ದಾವಣಗೆರೆ, ಜ. 11 – ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಎಂಸಿಸಿ `ಬಿ’ ಬ್ಲಾಕ್ ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯವರು ಸಂಸದರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಸಂಸದರು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಾಲಯಕ್ಕೂ ತೆರಳಿ ದೇವಿಯ ದರ್ಶನಾಶೀರ್ವಾದ ಪಡೆದರು.
ನಂತರ ತಮ್ಮ ಗೃಹ ಕಚೇರಿಗೆ ಭೇಟಿ ನೀಡಿದ ಸಾರ್ವಜನಿಕರು ಹಾಗೂ ಮುಖಂಡರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚೆ ನಡಸಿದರು.