ಗಾಂಧಿ ಮೈದಾನದಲ್ಲಿ ಇಂದು ಶ್ರೀ ಅಯ್ಯಪ್ಪ ಸ್ವಾಮಿ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಮಹಾ ದೀಪೋತ್ಸವ ಕಾರ್ಯಕ್ರಮ ಆಚರಿಸಲಾಗುವುದೆಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ಮುಖಂಡರಾದ ದುರುಗೋಜಿ ಮೋಹನ್ ಮತ್ತು ಚಿಂಚೊಳ್ಳಿ ಮಂಜುನಾಥ್ ತಿಳಿಸಿದರು.
ಬ್ರಹ್ಮ ಶ್ರೀ ವಿ.ಎನ್. ವಾಸುದೇವನ್ ನಂಬೋದು ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ. ಸಂಜೆ 4 ಗಂಟೆಗೆ ಮಹಾ ದೀಪೋತ್ಸವ ಮೆರವಣಿಗೆ ನಡೆಯಲಿದೆ.
ಸಂಜೆ 6ರಿಂದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಬಿ.ಪಿ. ಹರೀಶ್, ಪ್ರಕಾಶ್ ಕೋಳಿವಾಡ, ಮಾಜಿ ಶಾಸಕರಾದ ಹೆಚ್ ಎಸ್. ಶಿವಶಂಕರ್, ಎಸ್.ರಾಮಪ್ಪ, ಅರುಣ್ ಕುಮಾರ್ ಪೂಜಾರ್, ನಗರಸಭೆ ಅಧ್ಯಕ್ಷೆ ಕವಿತಾ ಬೇಡರ್, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ವಾಗೀಶ್ ಸ್ವಾಮಿ, ಗ್ರಾಪಂ ಅಧ್ಯಕ್ಷೆ ಗೀತಾ ಮಂಜುನಾಥ್, ಗ್ರಾಸಿಂನ ಸೌಮ್ಯ ಮೊಹಂತಿ, ಜ್ಯೋತಿ ಪ್ರಕಾಶ್ ಇತರರು ಭಾಗವಹಿಸಲಿದ್ದಾರೆ.
ರಾತ್ರಿ 8 ರಿಂದ ರಂಗುರಂಗಿನ ಸಿಡಿಮದ್ದು ಬಾಣ ಬಿರುಸಿನ ಪಟಾಕಿ ಪ್ರದರ್ಶನ ನಡೆಯಲಿದೆ. ನಾಳೆ ಭಾನುವಾರ ಬೆಳಗ್ಗೆ 11-30 ಕ್ಕೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.