ಬೆಂಗಳೂರು, ಜ. 10 – ರಾಜ್ಯದ ಗಣಿ ಮಾಲೀಕರುಗಳೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಭೆ ನಡೆಸಿದರು.
ಗಣಿ ಮಾಲೀಕರುಗಳ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು. ಇದೇ ವೇಳೆ ತೋಟಗಾರಿಕಾ, ಅರಣ್ಯ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಇದ್ದರು.