ಬಾಲಕಿಯರು ರಾಷ್ಟ್ರಮಟ್ಟಕ್ಕೆ ಬೆಳೆದು, ಹೆಸರು ಮಾಡಲಿ

ಬಾಲಕಿಯರು ರಾಷ್ಟ್ರಮಟ್ಟಕ್ಕೆ ಬೆಳೆದು, ಹೆಸರು ಮಾಡಲಿ

ದಾವಣಗೆರೆ, ಜ. 12- ದಾವಣಗೆರೆ ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ  ಕ್ರೀಡೆಗಳ ಮೂಲಕ ಶಾಲಾ ಬಾಲಕಿಯರ ಸಬಲೀಕರಣಕ್ಕಾಗಿ ಖೇಲೋ ಇಂಡಿಯಾ ಅಡಿಯಲ್ಲಿ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ  ನೇತೃತ್ವದಲ್ಲಿ ನಡೆಯುತ್ತಿರುವ ನಗರದ ಲೂರ್ಡ್ಸ್‌ ಬಾಯ್ಸ್ ಸ್ಕೂಲ್ ಆವರಣದಲ್ಲಿ ರಾಜ್ಯಮಟ್ಟದ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಹಿಳೆಯರ ತಂಡಗಳು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಉಳವಯ್ಯ ತಿಳಿಸಿದರು.

13 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನಡೆಯುವ ಪಂದ್ಯಾವಳಿಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸ್ಪರ್ಧಾಳುಗಳಿಗೆ ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ತಿಂದು ಖುಷಿಯಿಂದ ಸ್ಪರ್ಧೆಗಳನ್ನು ಆಡಿ  ಎಂದು ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕರಾದ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಮಕ್ಕಳಿಗೆ ಪ್ರೋತ್ಸಾಹ ನೀಡಿದರು.

ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ಅಜಯ್ ಅವರು ಇಂತಹ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಿಗೆ ಸರ್ಕಾರಿ ಕೆಲಸ ಸರ್ಕಾರಿ ಸೌಲಭ್ಯಗಳು ಲಭಿಸುವುದರಿಂದ ಉತ್ತಮ ಆಟಗಳನ್ನು ಪ್ರದರ್ಶಿಸಿ ಅಂತಹ ಸವಲತ್ತುಗಳನ್ನು ಪಡೆಯಿರಿ ಎಂದು ಮಕ್ಕಳಿಗೆ ತಿಳಿಸಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಫುಟ್ಬಾಲ್ ಅಧ್ಯಕ್ಷರಾದ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯರಾದ ಉದಯಕುಮಾರ್ ಯುವರಾಜ್ ತರಬೇತುದಾರ ಮುಸ್ತಫ ಚೇತನ್ ಕುಮಾರ್ ಮುಂತಾದವರಿದ್ದರು.

error: Content is protected !!