ದಾವಣಗೆರೆ, ಜ. 12- ಅಸ್ಸಾಂನ ಗುವಹಾಟಿಯಲ್ಲಿ ನಡೆದ 6ನೇ ವಾರ್ಷಿಕ ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಜಿಎಂ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಪ್ರತೀಕ್ ಎಸ್.ವಿ. ಪ್ರತಿನಿಧಿಸಿ ಮೋಯ್ ಥೈ ಕಿಕ್ ಬಾಕ್ಸಿಂಗ್ 69 ಕೆ.ಜಿ. ಒಳಗಿನ ವಿಭಾಗದಲ್ಲಿ ಬಂಗಾರದ ಪದಕ ಪಡೆದಿದ್ದಾರೆ.
January 13, 2025