ಸಿ.ಟಿ.ರವಿಯನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ: ಶೆಟ್ಟರ್ ಆರೋಪ

ಬೆಳಗಾವಿ, ಜ.12- ಹಿಂದುತ್ವದ ಬಗ್ಗೆ ಹೋರಾಡುವ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,  ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ, ವಿಧಾನ ಪರಿಷತ್‌ನಲ್ಲಿ ನಡೆದ ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ರವಿ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿತ್ತು. ಈಗ ಅವರಿಗೆ ಬೆದರಿಕೆ ಪತ್ರ ಬರೆಯಲಾಗಿದೆ. ಇದರಿಂದ ರಾಜ್ಯದಲ್ಲಿ ಕಾನೂನು ‌ಮತ್ತು ಸುವ್ಯವಸ್ಥೆ ಸಾಕಷ್ಟು ಹದಗೆಟ್ಟಿದೆ. ಅರಾಜಕತೆ ಸೃಷ್ಟಿಯಾಗಿದೆ ಎಂಬುದು ತಿಳಿಯುತ್ತದೆ  ಎಂದು ದೂರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ಏಜೆಂಟರಂತೆ ಪೊಲೀಸರು ವರ್ತಿಸುವುದು ಸರಿಯಲ್ಲ. ಇಲ್ಲಿನ ಗೂಂಡಾ ಸಂಸ್ಕೃತಿಯನ್ನು ‌ಜನರು ವಿರೋಧಿಸುತ್ತಾರೆ. ಸುವರ್ಣ ವಿಧಾನಸೌಧದಲ್ಲಿ ಗೂಂಡಾಗಿರಿ ಮಾಡಿದವರು ಮತ್ತು ಈಗ ರವಿ ಅವರಿಗೆ ಬೆದರಿಕೆ ಪತ್ರ ಬರೆದವರನ್ನು ಮೊದಲು ಬಂಧಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.

error: Content is protected !!