ಸರ್ಕಾರಿ ಶಾಲೆ ಅಭಿವೃದ್ಧಿಗೆ ಸಂಘ-ಸಂಸ್ಥೆ ಸಹಕಾರ ಅಗತ್ಯ: ಶಾಸಕ ಬಸವಂತಪ್ಪ

ಸರ್ಕಾರಿ ಶಾಲೆ ಅಭಿವೃದ್ಧಿಗೆ ಸಂಘ-ಸಂಸ್ಥೆ ಸಹಕಾರ ಅಗತ್ಯ: ಶಾಸಕ ಬಸವಂತಪ್ಪ

ದಾವಣಗೆರೆ, ಜ.12- ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘ – ಸಂಸ್ಥೆಗಳೂ ಸಹಕಾರ ನೀಡಬೇಕು ಎಂದು ಮಾಯ ಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ತಿಳಿಸಿದರು.

ಜಿ.ಪಂ., ತಾ.ಪಂ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹ ಯೋಗದಲ್ಲಿ ತಾಲ್ಲೂಕಿನ ಕೋಲ್ಕುಂಟೆ ಗ್ರಾ ಮದಲ್ಲಿ ಭಾನುವಾರ ರಾಷ್ಟ್ರೀಯ ಫೌಂಡೇ ಶನ್‌ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆಯ 4 ಹೈಟೆಕ್ ಕೊಠಡಿ ಮತ್ತು ಶೌಚಗೃಹ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೇವಲ ಸರ್ಕಾರದ ಅನುದಾನದಿಂದಲೇ ಸರ್ಕಾರಿ ಶಾಲೆಗಳ ಅಭಿವೃದ್ಧಿ ಅಸಾಧ್ಯ. ಆದ್ದರಿಂದ ಸಂಘ-ಸಂಸ್ಥೆಗಳು ಹಾಗೂ ಎನ್‌ಜಿಒ ಗಳು ಶಿಥೀಲಗೊಂಡ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದೆ ಬರಬೇಕು ಎಂದು ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಸರ್ಕಾರಿ ಶಾಲೆಗಳು ಶಿಥಿಲಗೊಂಡು ದುಸ್ಥಿತಿಯಲ್ಲಿ ಇವೆ. ಮಳೆ ಬಂದರೆ ಸೋರುತ್ತವೆ. ಇಂತಹ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಶಿಕ್ಷಣ ಪ್ರೇಮಿಗಳು ಹಾಗೂ ದಾನಿಗಳು ಕೈಜೋಡಿಸಬೇಕು ಎಂದರು.

ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ರಾಷ್ಟ್ರೀಯ ಆಹ್ವಾನ ಫೌಂಡೇಶನ್ ವತಿ ಯಿಂದ 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಶಾಲಾ ಕೊಠಡಿ, ಶೌಚಾಲಯ ನಿರ್ಮಿಸಲಾಗುತ್ತಿದೆ. ಇಂತಹ ಸತ್ಕಾರ್ಯ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಆಸರೆಯಾಗಲಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಕೊಟ್ರೇಶ್, ಕೋಲ್ಕುಂಟೆ ಗ್ರಾಮಾಭ್ಯುದಯ ಸಂಘದ ಗೌರವಾಧ್ಯಕ್ಷ ಸುಚೇಂದ್ರ ಪ್ರಸಾದ್, ಆಹ್ವಾನ ಫೌಂಡೇಶನ್‌ನ ಬ್ರಜ ಕಿಶೋರ್ ಪ್ರಧಾನ್, ಮಾನಸಿ, ಶಾಲೆಯ ಮುಖ್ಯ ಶಿಕ್ಷಕ ಚಂದ್ರಪ್ಪ, ಓಂಕಾರಪ್ಪ, ಚಂದ್ರಪ್ಪ, ಪಿಡಿಒ ಇಸ್ರತ್, ಅಶೋಕ್, ಲೋಕೇಶ್, ಎಸ್‌ಡಿಎಂಸಿ ಸದಸ್ಯರು, ಮಕ್ಕಳು ಹಾಗೂ ಗ್ರಾಮಸ್ಥರು ಇದ್ದರು.

error: Content is protected !!