ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ: ಶಾಸಕ ಶಿವಗಂಗಾ

ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ: ಶಾಸಕ ಶಿವಗಂಗಾ

ದಾವಣಗೆರೆ, ಜ.12- ವಿಧಾನಸಭಾ ಚುನಾವಣೆಯ ಬಳಿಕ ನಡೆದ ಕೆಲ ಬೆಳವಣಿಗೆಗಳಿಂದ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಒಲಿದಿದೆ. ಕುರ್ಚಿ ಖಾಲಿಯಾದ ತಕ್ಷಣ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿ ಆಗಬೇಕಿತ್ತು. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ದೊಡ್ಡದಿದೆ ಎಂದರು. ಮೂರು ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ಮೂಲಕ ಉಪಚುನಾವಣೆಯಲ್ಲಿ ಕೂಡ ಡಿ.ಕೆ. ಶಿವಕುಮಾರ್ ಶಕ್ತಿ ಪ್ರದರ್ಶಿಸಿದ್ದಾರೆ. ಹೈಕಮಾಂಡ್‌ ಇದನ್ನು ಗಮನಿಸಿ ತೀರ್ಮಾನ ಕೈಗೊಳ್ಳುತ್ತದೆ. ಅವರಿಗೆ ಪ್ರತಿಫಲ ಸಿಗುವ ವಿಶ್ವಾಸವಿದೆ ಎಂದು ಜೆಡಿಎಸ್‌ನ 11 ಶಾಸಕರು ಕಾಂಗ್ರೆಸ್‌ಗೆ ಬರಲು ಸಜ್ಜಾಗಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಡಿ.ಕೆ.ಶಿವಕುಮಾರ್‌ ಮಾಡುತ್ತಿದ್ದಾರೆ. ಮಾತಿಗಿಂತ ಹೆಚ್ಚು ಕೆಲಸ ಮಾಡುವುದು ಅವರ ಕಾರ್ಯವೈಖರಿ. ಕಷ್ಟಪಟ್ಟವರಿಗೆ ಒಳ್ಳೆಯ ದಿನಗಳು ಬರುತ್ತವೆ ಎಂದರು.

error: Content is protected !!