ದಾವಣಗೆರೆ, ಜ. 14- ಬೆಳಗಾವಿಯಲ್ಲಿ ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಎಐಸಿಸಿ ಅಧಿವೇಶನ ನಡೆದ ಅಂಗವಾಗಿ ಇದೇ 21ರಂದು ನಡೆಯುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾಂಗ್ರೆಸ್ ಪಕ್ಷದ ಬೃಹತ್ ಸಭೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೂರ್ವಭಾವಿ ಸಭೆಯನ್ನು 16ರ ಗುರುವಾರ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಎಸ್.ಎಸ್.ಭವನದಲ್ಲಿ ಕರೆಯಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.