ಬೆಂಗಳೂರು, ಜ. 14 – ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಇಲ್ಲಿನ ಅವರ ನಿವಾಸದಲ್ಲಿ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭೇಟಿ ಮಾಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಸಮರ್ಥ್ ಮಲ್ಲಿಕಾರ್ಜುನ್ ಸೇರಿದಂತೆ ಎಸ್ಸೆಸ್ ಕುಟುಂಬದವರು ಇದ್ದರು.