ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ 7.15ಕ್ಕೆ `ಸಿರಿಧಾನ್ಯ’ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಜಯದೇವ ವೃತ್ತದಿಂದ ಪ್ರಾರಂಭಗೊಂಡು ಹಳೇ ಪಿ.ಬಿ. ರಸ್ತೆ, ಎವಿಕೆ ಕಾಲೇಜು ರಸ್ತೆ, ಹರಳೆಣ್ಣೆ ಕೊಟ್ರಬಸಪ್ಪ ವೃತ್ತದ ಮಾರ್ಗವಾಗಿ ಡಾ. ಎಂ.ಸಿ. ಮೋದಿ ವೃತ್ತದಲ್ಲಿ ಕಾರ್ಯ ಕ್ರಮ ಮುಕ್ತಾಯವಾಗಲಿದೆ. ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಎಸ್ಪಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಆಸಕ್ತರು ಭಾಗವಹಿಸಲಿದ್ದಾರೆ.