ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ ಧನ್ಯವಾದ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ ಧನ್ಯವಾದ

ದಾವಣಗೆರೆ, ಜ. 16- ಜಗಳೂರಿನಲ್ಲಿ ಕಳೆದ ವಾರ ಜರುಗಿದ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗಾಗಿ  ಶ್ರಮಿಸಿದ  ಸರ್ವರಿಗೂ  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷ ಬಿ.ವಾಮದೇವಪ್ಪ ಧನ್ಯವಾದ ಸಲ್ಲಿಸಿದ್ದಾರೆ.  ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಶಾಸಕ  ಬಿ.ದೇವೇಂದ್ರಪ್ಪ  ನೇತೃತ್ವದಲ್ಲಿ ಚಿಂತಕ ಡಾ. ಎ.ಬಿ. ರಾಮಚಂದ್ರಪ್ಪ ಸರ್ವಾಧ್ಯಕ್ಷತೆಯಲ್ಲಿ, ಸ್ವಾಗತ ಸಮಿತಿಯ ಸಂಚಾಲಕ ಎನ್‌.ಟಿ.ಎರಿಸ್ವಾಮಿ ಮಾರ್ಗದರ್ಶನದಲ್ಲಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಿತು ಎಂದು ಅವರು ತಿಳಿಸಿದ್ದಾರೆ.   

error: Content is protected !!