ಕೆಯುಡಬ್ಲ್ಯುಜೆಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿಧಿ ಪ್ರಶಸ್ತಿ ಸ್ಥಾಪನೆಗೆ ಮುಂದಾದ ಆದಿಚುಂಚನಗಿರಿ ಮಠ

ಕೆಯುಡಬ್ಲ್ಯುಜೆಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ  ದತ್ತಿ ನಿಧಿ ಪ್ರಶಸ್ತಿ ಸ್ಥಾಪನೆಗೆ ಮುಂದಾದ ಆದಿಚುಂಚನಗಿರಿ ಮಠ

ಬೆಂಗಳೂರು, ಜ. 17 – ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ.

ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡ ಬ್ಲ್ಯುಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಜೊತೆಗೆ ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ನೆನಪಿನಲ್ಲಿ ಚುಂಚಶ್ರೀ ಪ್ರಶಸ್ತಿ ಸ್ಥಾಪಿಸಲು 10 ಲಕ್ಷ ರೂ. ಠೇವಣಿ ಇಡುವುದಾಗಿ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸ್ವಾಗತಿಸುತ್ತದೆ. ಡಾ.ನಿರ್ಮಲಾನಂದನಾಥ‌ ಸ್ವಾಮೀಜಿ ಅವರ ಆಶಯ ದಂತೆ ಠೇವಣಿ ಇಟ್ಟ ಬಳಿಕ ಪ್ರತಿ ವರ್ಷವೂ ಸಮ್ಮೇಳನದಲ್ಲಿ ಸಾಧಕ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

error: Content is protected !!