ಪಟ್ಟಣದ ಶ್ರೀಮತಿ ಬಸಮ್ಮ ಕೆಂಚಪ್ಪ ಮಡಿವಾಳರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 2024-25ನೇ ಸಾಲಿನ ಶಾಲೆಯ ವಾರ್ಷಿಕ ಸ್ನೇಹಕೂಟ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ದಂಡಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಬೆಳಿಗ್ಗೆ 10.30ಕ್ಕೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹೆಚ್.ಜಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕ ಹೆಚ್.ಎಸ್. ವೀರಭದ್ರಯ್ಯ ಉದ್ಘಾಟಿಸಲಿದ್ದಾರೆ.
ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಲಿದ್ದು, ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ವಿಜಯರಾಘವ ಅಧ್ಯಕ್ಷತೆ ವಹಿಸುವರು. ಯುವ ಮುಖಂಡರಾದ ಚಂದ್ರಶೇಖರ್ ಪೂಜಾರ್, ನಂದಿಗಾವಿ
ಶ್ರೀನಿವಾಸ್, ಪುರಸಭೆ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಪ್ಸಿಯಾಬಾನು, ಬಿಇಓ ದುರುಗಪ್ಪ,, ಬಿ. ಚಿದಾನಂದಪ್ಪ, ಡಾ. ಬಿ. ಚಂದ್ರಶೇಖರ್, ಜಿಗಳಿ ಇಂದೂಧರ್ ಸೇರಿದಂತೆ ಇನ್ನೂ ಅನೇಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.