ನಗರದಲ್ಲಿ ಇಂದು ಬಿಸಿಯೂಟ ತಯಾರಕರಿಂದ ಪ್ರತಿಭಟನೆ

ಬರುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಇಂದು ಎಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಸಿಯೂಟ ತಯಾರಕರ ಫೆಡರೇಶನ್‌ ಜಿಲ್ಲಾಧ್ಯಕ್ಷ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.

ದಾವಣಗೆರೆ ತಾಲ್ಲೂಕಿನ ಎಲ್ಲಾ ಬಿಸಿಯೂಟ ತಯಾರಕರು ಇಂದು ಮಧ್ಯಾಹ್ನ 1.30 ಗಂಟೆಗೆ ದಾವಣಗೆರೆ ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಎಸಿ ಕಚೇರಿ ಬಳಿ ಆಗಮಿಸಿ,  ಬರುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದಾವಣಗೆರೆ ಎಸಿಯವರ ಮೂಲಕ ಮನವಿ
ಸಲ್ಲಿಸಲಾಗುವುದು. 

ದಾವಣಗೆರೆ ತಾಲ್ಲೂಕಿನ ಎಲ್ಲಾ ಬಿಸಿಯೂಟ ತಯಾರಕರು ಶಾಲೆಯಲ್ಲಿ ಅಡುಗೆ ಮಾಡಿಟ್ಟು ದಾವಣಗೆರೆ ಎಸಿ ಕಚೇರಿ ಹತ್ತಿರ ಬರಬೇಕೆಂದು ಬಿಸಿಯೂಟ ತಯಾರಕರ ಫೆಡರೇಶನ್ ತಾಲ್ಲೂಕು ಅಧ್ಯಕ್ಷರಾದ ಮಳಲ್ಕೆರೆ ಜಯಮ್ಮ, ಕಾರ್ಯದರ್ಶಿ ಜ್ಯೋತಿಲಕ್ಷ್ಮಿ, ಖಜಾಂಚಿ ಪದ್ಮಾ, ಉಪಾಧ್ಯಕ್ಷರಾದ ಅಣಜಿ ನಾಗರತ್ನಮ್ಮ ಮತ್ತಿತರರು ತಿಳಿಸಿದ್ದಾರೆ.

error: Content is protected !!