ಕೊಂಡಜ್ಜಿ ರಸ್ತೆ ಸಿದ್ದಗಂಗಾ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಸರ್ಕಲ್ ಗೆಳೆಯರ ಬಳಗದಿಂದ ತ್ರಿವಿಧ ದಾಸೋಹಿ, ಶ್ರೀಮನ್ನಿರಂಜನ ಪ್ರಣವಸ್ವರೂಪಿ ಸಿದ್ದಗಂಗಾ ಡಾ. ಶ್ರೀ ಶಿವಕುಮಾರ ಮಹಸ್ವಾಮಿಗಳ ಆರನೇ ವರ್ಷದ ಪುಣ್ಯ ಸ್ಮರಣೋತ್ಸವ ಮತ್ತು ಶ್ರೀಗಳ ಪುತ್ಥಳಿ ಅನಾವರಣ ಹಾಗೂ ದಾಸೋಹ ದಿನ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ವಿರಕ್ತ ಮಠದ ಶ್ರೀ ಡಾ. ಬಸವಪ್ರಭು ಸ್ವಾಮೀಜಿ, ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶ್ರೀ ಡಾ. ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸಿದ್ದಬಸವ ಕಬೀರ ಸ್ವಾಮೀಜಿ, ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶ್ರೀ ಸಂಗಮಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ಮತ್ತು ಪುತ್ಥಳಿ ಅನಾವರಣಗೊಳಿಸಲಿದ್ದಾರೆ.
ರಾಜನಹಳ್ಳಿ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಪ್ರಭಾ ಮಲ್ಲಿಕಾರ್ಜುನ್, ಜಿ.ಎಂ. ಸಿದ್ದೇಶ್ವರ, ಎಸ್.ಎ. ರವೀಂದ್ರನಾಥ್, ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಯಶವಂತರಾವ್ ಜಾಧವ್, ಜೆ.ಎನ್. ಶ್ರೀನಿವಾಸ್, ಗೋಣೆಪ್ಪ, ಉದಯಕುಮಾರ್, ಆಶಾ ಉಮೇಶ್, ಡಾ. ಸುಭಾಷ್, ಕರೂರು ಹನುಮಂತಣ್ಣ, ನವೀನ್, ಪಲೈ ಮಂಜುನಾಥ್ ಉಪಸ್ಥಿತರಿರುವರು.