ದಾವಣಗೆರೆ, ಜ.22- ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬೈಕ್ ವೀಲಿಂಗ್ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಎರಡು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬೈಕ್ ವ್ಹೀಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭರಮಸಾಗರ ನಿವಾಸಿ ರಸೂಲ್, ದಾವಣಗೆರೆ ನಗರದ ಎಸ್ಓಜಿ ಕಾಲೋನಿಯ ನಿವಾಸಿ ಹಜರತ್ ಅಲಿ ಎಂಬುವವರನ್ನು ಬಂಧಿಸಲಾಗಿದೆ.
ಇನ್ನು ಮತ್ತೊಂದು ಬೈಕ್ನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿದ್ದವರ ಮೇಲೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ-ಗಳಾದ ವಿಜಯ್ ಕುಮಾರ್ ಎಂ ಸಂತೋಷ್ ಮತ್ತು ಮಂಜುನಾಥ್, ನಗರದ ಡಿವೈಎಸ್ಪಿ ಶರಣಬಸವೇಶ್ವರ ಬಿ.ಭೀಮರಾವ್, ಟ್ರಾಫಿಕ್ ಇನ್ಸ್ಪೆಕ್ಟರ್ ಎನ್. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶೈಲಜಾ ಅವರ ನೇತೃತ್ವದಲ್ಲಿ ಪಿಎಸ್ಐ ನಿರ್ಮಲ, ಎಎಸ್ಐ ಅಣ್ಣಯ್ಯ, ಸಿಬ್ಬಂದಿ ಕೆ. ನಾಗರಾಜ್, ಪ್ರವೀಣ್ ಕುಮಾರ್, ರವಿನಾಯಕ್, ಶಿವಮೂರ್ತಿ ನಾಯ್ಕ ಅವರ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ಬೇಧಿಸಿದ್ದಾರೆ.