ದಾವಣಗೆರೆ, ಜ. 23 – ಮುಡಾ ಹಗರಣದಲ್ಲಿ ಸಿ.ಎಂ. ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿಂದ ಸತ್ಯಕ್ಕೆ ಜಯ ದೊರಕಿದೆ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪು ಚುಕ್ಕೆ ತರುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ, ಆದರೆ ಇದು ನಡೆಯುವುದಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡಿದೆ.
ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.