ಉಪಾಧ್ಯಕ್ಷರಾಗಿ ಕೆ.ಬಿ. ಮಂಜುನಾಥ್ ಅವಿರೋಧ ಆಯ್ಕೆ
ಹರಿಹರ, ಜ. 23 – ನಗರದ ದಿ ತುಂಗಭದ್ರಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ನೂತನ ಅಧ್ಯಕ್ಷರಾಗಿ ಡಿ. ಹೇಮಂತರಾಜ್ ಮತ್ತು ಉಪಾಧ್ಯಕ್ಷರಾಗಿ ಕೆ.ಬಿ. ಮಂಜುನಾಥ್ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೆಚ್. ಸುನಿತಾ ಘೋಷಣೆ ಮಾಡಿದರು.
ನಗರದ ದಿ ತುಂಗಭದ್ರಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಭಾಂಗಣದಲ್ಲಿ ಇಂದು ಸಂಜೆ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಡಿ. ಹೇಮಂತರಾಜ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಬಿ. ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದರು.
ಚುನಾವಣಾ ಅಧಿಕಾರಿಗಳು ನಾಮ ಪತ್ರಗಳನ್ನು ಪರಿಶೀಲಿಸಿ ಕ್ರಮಬದ್ಧವಾಗಿರುವುದನ್ನು ಸಭೆಯ ಗಮನಕ್ಕೆ ತಂದು ಮುಂದಿನ ಐದು ವರ್ಷದ ಅವಧಿಗೆ ದಿ ತುಂಗಭದ್ರಾ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಡಿ. ಹೇಮಂತರಾಜ್ ಮತ್ತು ಉಪಾಧ್ಯಕ್ಷರಾಗಿ ಕೆ.ಬಿ. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.