ಹರಪನಹಳ್ಳಿ,ಜ.28- ತಾಲ್ಲೂಕಿನ ದಡಿಗಾರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಎರಡು ಮಾಳಿಗೆ ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ.
ವಿಷಯ ತಿಳಿದು ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪುರಸಭೆ ಮಾಜಿ ಅಧ್ಯಕ್ಷ ಹರಾಳು ಹೆಚ್.ಎಂ.ಅಶೋಕ್, ಹಾನಿಗೊಳಗಾದ ಕುಟುಂಬಗಳಿಗೆ ಸಾಂತ್ವನ ಹೇಳಿ, ಗೃಹಬಳಕೆ ವಸ್ತುಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.