ಬಿ.ಆರ್. ಪಾಟೀಲ್ ಅವರಿಗೆ ವಿಶ್ವ ಕನ್ನಡ ಸಮ್ಮೇಳನಕ್ಕೆ ಮನವಿ ಅರ್ಪಣೆ

ಬಿ.ಆರ್. ಪಾಟೀಲ್ ಅವರಿಗೆ ವಿಶ್ವ ಕನ್ನಡ ಸಮ್ಮೇಳನಕ್ಕೆ ಮನವಿ ಅರ್ಪಣೆ

ದಾವಣಗೆರೆ, ಜ. 30-  ಇಂದು ದಾವಣಗೆರೆ ನಗರದ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ಹುತಾತ್ಮರ ದಿನಾಚರಣೆಗೆ ಉದ್ಘಾಟಕರಾಗಿ ಆಗಮಿಸಿದ್ದ ರಾಜ್ಯ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಬಿ.ಆರ್. ಪಾಟೀಲ್ ಅವರಿಗೆ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನದ ಬಗ್ಗೆ ಮನವಿ ಪತ್ರ ಅರ್ಪಿಸಲಾಯಿತು. 

ಮಾರ್ಚ್‌ನಲ್ಲಿ ಮಂಡಿಸಲಿರುವ ರಾಜ್ಯ ಆಯವ್ಯಯ ಪತ್ರದಲ್ಲಿ ಕನಿಷ್ಠ 50 ಕೋಟಿ ಹಣವನ್ನು ಮೀಸಲಿರಿಸುವಂತೆ ಹಾಗೂ 2025ರಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸುವ ದಿನಾಂಕವನ್ನು ಘೋಷಿಸುವಂತೆ ಮನವಿ ಪತ್ರದಲ್ಲಿ ವಿನಂತಿಸಲಾಗಿದೆ.

ಈ ಸಂಧರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಬಡದಾಳ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ,  ಗೌರವ ಸಲಹೆಗಾರ ಬಿ.ಎನ್. ಮಲ್ಲೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.  ಮನವಿ ಪತ್ರ ಸ್ವೀಕರಿಸಿ ಸಕಾರಾತ್ಮಕವಾಗಿ ಉತ್ತರಿಸಿದ ಬಿ.ಆರ್. ಪಾಟೀಲ್, ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ತಿಳಿಸಿದರು.

error: Content is protected !!