ಕುರುವ : ನೂತನ ಮೂರ್ತಿಗಳ ಪ್ರತಿಷ್ಠಾಪನೆ

ಕುರುವ : ನೂತನ ಮೂರ್ತಿಗಳ ಪ್ರತಿಷ್ಠಾಪನೆ

ನ್ಯಾಮತಿ ತಾಲ್ಲೂಕಿನ ಕುರುವ ಗ್ರಾಮದಲ್ಲಿ ನೂತನ ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿಗಳ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯ ಕ್ರಮಗಳು ಇಂದು ಮತ್ತು ನಾಳೆ ನಡೆಯಲಿವೆ.  ಇಂದು ಸಂಜೆ 6 ಕ್ಕೆ ದೇವರುಗಳ ಮೆರವಣಿಗೆ ಜರುಗಲಿದೆ. ನಾಳೆ ಬ್ರಾಹ್ಮೀ ಮೂಹೂರ್ತದಲ್ಲಿ ಕಳಸಾರೋಹಣ, ಮಹಾಮಂಗಳಾರತಿ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಧರ್ಮ ಸಭೆಯ ನೇತೃತ್ವವನ್ನು ಹಿರೇಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಹಾಲಸ್ವಾಮಿಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಮತ್ತು ಗೋವಿನ ಕೋವಿ ಹಾಲಸ್ವಾಮೀಜಿ ಮಠದ ಪೀಠಾಧ್ಯಕ್ಷ ಶಿವಯೋಗಿ ಮಹಾಲಿಂಗ ಸ್ವಾಮೀಜಿ ವಹಿಸಲಿದ್ದಾರೆ. 

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಉಪಸ್ಥಿತರಿರುವರು. ಸಂಜೆ 6.30ಕ್ಕೆ ರಸಮಂಜರಿ ಕಾರ್ಯಕ್ರಮ ಇರುತ್ತದೆ. ಸಾಮೂಹಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. 

error: Content is protected !!