ನಾಡಿದ್ದು ಚನ್ನಗಿರಿ ಬಂದ್‌ಗೆ ಕರೆ

ದಾವಣಗೆರೆ, ಜ. 31 – ಯುವತಿಯರ ಜೊತೆ ರಾಸಲೀಲೆ ನಡೆಸಿ ವಿಡಿಯೋ ಚಿತ್ರೀಕರಿಸುತ್ತಿದ್ದ ಅಮ್ಜದ್‌ಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಫೆಬ್ರವರಿ 3ರಂದು  ಚನ್ನಗಿರಿ ಸ್ವಯಂಪ್ರೇರಿತ ಬಂದ್ ಗೆ ಕರೆ ಕೊಡಲಾಗಿದೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಹಿಳಾ, ಹಿಂದೂ ಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳಿಂದ ಕರೆ ನೀಡಲಾಗಿದ್ದು, ಅಂದು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

error: Content is protected !!