ಪರಿಸರ ಸ್ವಚ್ಛತೆಯಿಂದ ಕಾಯಿಲೆಗಳನ್ನು ನಿಯಂತ್ರಿಸಬಹುದು: ಡಾ. ನಾಗೇಂದ್ರಪ್ಪ

ದಾವಣಗೆರೆ, ಫೆ.2- ಪರಿಸರ ಸ್ವಚ್ಛವಾಗಿದ್ದರೆ ಇದರಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಚಿಗಟೇರಿ ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಎಂ.ಬಿ.ನಾಗೇಂದ್ರಪ್ಪ ತಿಳಿಸಿದರು. 

 ಶನಿವಾರ ಮಹಾನಗರ ಪಾಲಿಕೆ ಮತ್ತು ಚಿಗಟೇರಿ ಜಿಲ್ಲಾ ಆಸ್ಪತ್ರೆ ವತಿಯಿಂದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಆಂದೋಲನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.  ಸ್ವಚ್ಛತೆಯಿಂದ ಸುತ್ತಮುತ್ತಲಿನ  ಪರಿಸರದ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬಹುದು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಸಂಗ್ರಹಣಾ ಸ್ಥಳಗಳಲ್ಲಿ ಮಾತ್ರ ಹಾಕಬೇಕು. ಆಸ್ಪತ್ರೆ ಆವರಣದಲ್ಲಿ ಆಹಾರದ ತಿನಿಸುಗಳನ್ನು ಹಾಕಿ ಇನ್ನೊಬ್ಬರಿಗೆ ತೊಂದರೆಯಾಗುವ ರೀತಿಯಲ್ಲಿ ಮಾಡುತ್ತಾರೆ. ಇದರಿಂದ ಹಲವಾರು ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುತ್ತದೆ, ಆಸ್ಪತ್ರೆಗೆ ಬರುವ ಸಾರ್ವಜನಿಕರು ಜಾಗೃತರಾಗಬೇಕೆಂದರು.  

  ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ  ಗಡಿಗುಡಾಳು ಮಂಜುನಾಥ, ಪಾಲಿಕೆಯ ಪೌರಕಾರ್ಮಿಕರು,  ಆರೋಗ್ಯ ರಕ್ಷಾ ಸಮಿತಿ  ಸದಸ್ಯರು,  ಸಿಬ್ಬಂದಿ ಹಾಗೂ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!