ದಾವಣಗೆರೆ, ಫೆ. 2 – ಕೇಂದ್ರ ಸರ್ಕಾರ ಈಚೆಗೆ ಮಂಡಿಸಿದ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಎಐಟಿಯುಸಿ ಸಂಯೋಜಿತ ಬಿಸಿಯೂಟ ತಯಾರಕರ ಫೆಡರೇಶನ್‌ನ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ದೂರಿದ್ದಾರೆ.
ರಾಜ್ಯಾದ್ಯಂತ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ ಮಾಸಿಕ 3600 ರೂಪಾಯಿ ಗೌರವ ಸಂಭಾವನೆ ಬರುತ್ತಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಕೇವಲ 600 ರೂಗಳನ್ನು ಮಾತ್ರ ತನ್ನ ಪಾಲಿನ ಹಣ ನೀಡುತ್ತಿದೆ ಉಳಿದ ಗೌರವ ಸಂಭಾವನೆಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾ ರದ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನದಲ್ಲಿ ಹೆಚ್ಚಳವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಬಿಸಿಯೂಟ ತಯಾರಕರಿಗೆ ನಿರಾಸೆಯಾಗಿದೆ, ಕೇಂದ್ರ ಸರ್ಕಾರ ದೇಶಾದ್ಯಂತ ಇರುವ ದುಡಿಯುವ ಮಹಿಳೆಯರ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.