ದಾವಣಗೆರೆ, ಫೆ. 4- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸಮಿತಿ ಸದಸ್ಯರನ್ನಾಗಿ ಪರಿಸರ ತಜ್ಞ ಡಾ. ಎಸ್. ಮಂಜಪ್ಪ ಸಾರಥಿ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ದಾವಣಗೆರೆ ಬಿಐಇಟಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾಗಿರುವ ಮಂಜಪ್ಪ, ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರು ಮತ್ತು ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಲಹೆಗಾರರಾಗಿದ್ದಾರೆ.