ದಾವಣಗೆರೆ, ಫೆ.4- ತಾಲ್ಲೂಕಿನ ಕಕ್ಕರಗೊಳ್ಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಇಂದು ನಡೆದ ನಿರ್ದೇಶಕರ ಚುನಾವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷ- ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ಹೆಚ್.ಡಿ. ಸುಭಾಷ್ ಚಂದ್ರಪ್ಪ, ಉಪಾಧ್ಯಕ್ಷರಾಗಿ ಕೆ.ಪಿ. ಕಲ್ಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇವರಿಬ್ಬರಿಗೂ ಸಮನಾಗಿ ಮತಗಳು ಬಂದ ಕಾರಣ ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ, ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಉಷಾ ತಿಳಿಸಿದ್ದಾರೆ.