ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ದಿಕ್ಸೂಚಿ ಕಾರ್ಯಾಗಾರದಲ್ಲಿ ಜಿ.ಬಿ. ವಿನಯ್
ಹೊನ್ನಾಳಿ, ಜ.4- ಉತ್ತಮ ಗುಣಗಳನ್ನು ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕುವ ಗಟ್ಟಿ ನಿರ್ಧಾರದ ಕ್ರಾಂತಿ ಆಗಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ತಿಳಿಸಿದರು.
ಸ್ವಾಭಿಮಾನಿ ಬಳಗ, ಚನ್ನಪ್ಪ ಸ್ವಾಮಿ ಜನಕಲ್ಯಾಣ ಟ್ರಸ್ಟಿನ ಸಹಯೋಗದಲ್ಲಿ ಹೊನ್ನಾಳಿ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಪಿಯುಸಿ, ಡಿಗ್ರಿ, ಐಟಿಐ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದಿಕ್ಸೂಚಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬಡತನದ ಬಗ್ಗೆ ಕೊರಗದೇ, ಎಷ್ಟೇ ಕಷ್ಟ ಬಂದರೂ ಜ್ಞಾನ ಸಂಪಾದಿಸಿಕೊಳ್ಳುವ ಹಸಿವು ಕುಗ್ಗಬಾರದು. ಆಗ ಭವಿಷ್ಯದಲ್ಲಿ ಅಂಬೇಡ್ಕರ್ ರಂತೆ ಸಾಧಕರಾಗಬಹುದು ಎಂದು ಕಿವಿಮಾತು ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಅನುಭವಿಸಿದ ನೋವು, ಯಾತನೆ, ಅಸ್ಪೃಶ್ಯತೆ ಸೇರಿದಂತೆ ಎಲ್ಲಾ ವಿಚಾರಗಳನ್ನು ಓದಿ ತಿಳಿದಿದ್ದೇವೆ. ಸ್ವಾತಂತ್ರ್ಯ ಸಿಕ್ಕರೂ ಸಮಾಜದಲ್ಲಿ ಅಸಮಾನತೆ ಇಂದಿಗೂ ತಾಂಡವವಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿರೇಕಲ್ಮಠದ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸ್ವಾಭಿಮಾನಿ ಬಳಗದ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿರೂಪಾಕ್ಷಪ್ಪ ಪಂಡಿತ್, ರಾಜಣ್ಣ ಕನಗಣ್ಣನವರ್, ಶಿವಕುಮಾರ್ ಸಂಬಳಿ, ರಾಜ್ಯ ಸಂಚಾಲಕ ಅಯ್ಯಣ್ಣ ಹುಲ್ಕಲ್, ರಮೇಶ್ ಮೈಸೂರು, ಧನುಷ್ ಕತ್ತಲಗೆರೆ, ನಾಗರಾಜ್ ಇತರರು ಇದ್ದರು.