ಹುಚ್ಚಂಗಿಪುರದಲ್ಲಿ ಇಂದು ನೂತನ ಶಾಲಾ ಕಟ್ಟಡ ಉದ್ಘಾಟನೆ

ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಸಂಸದರುಗಳ ಹಾಗೂ ಶಾಸಕರುಗಳ ಇವರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ನೂತನ ಶಾಲಾ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12.30ಕ್ಕೆ ಜಗಳೂರು ತಾಲ್ಲೂಕು ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಬಿ. ದೇವೇಂದ್ರಪ್ಪ ಅಧ್ಯಕ್ಷತೆ ವಹಿಸುವರು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸಂಸದರಾದ ಲೆಹರ್ ಸಿಂಗ್ ಸಿರೋಯಾ, ಕೆ. ನಾರಾಯಣ, ವೀರಣ್ಣ ಕಡಾಡಿ, ವಿಧಾನ ಪರಿಷತ್ ಶಾಸಕ ಎನ್. ರವಿಕುಮಾರ್, ಡಾ. ಎಂ.ಜಿ. ಮೂಳೆ, ಡಿ.ಟಿ. ಶ್ರೀನಿವಾಸ್, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ. ಅಧ್ಯಕ್ಷ ಗುತ್ಯಮ್ಮ ಸಿದ್ದಪ್ಪ, ಡಿಸಿ ಗಂಗಾಧರಸ್ವಾಮಿ, ಜಿ.ಪಂ. ಸಿಇಓ ಸುರೇಶ್.ಬಿ.ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್, ಎಸ್.ಡಿ.ಎಂ.ಸಿ ಅಧ್ಯಕ್ಷ ಪಿ.ಟಿ. ರಮೇಶ್ ಭಾಗವಹಿಸುವರು.

ದಾನಿಗಳು : ಸ್ಪೇಸ್ ಮ್ಯಾನೇಜ್‍ಮೆಂಟ್ ಸಲ್ಯೂಷನ್ ಲಿಮಿಟೆಡ್‍ನ ಡಾ. ದಿನೇಶ್, ವೋಲ್ವೋ ಗ್ರೂಪ್
ಜಿ.ವಿ. ರಾವ್ ಪಾಲ್ಗೊಳ್ಳುವರು.

error: Content is protected !!