ಯುವನಿಧಿ ಯೋಜನೆಗೆ ಅರ್ಜಿ

 ದಾವಣಗೆರೆ, ಫೆ. 9 – ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿಯಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.    

ಅರ್ಜಿ ಸಲ್ಲಿಸಲು ಇದೇ ದಿನಾಂಕ 15 ಕೊನೆಯ ದಿನವಾಗಿರುತ್ತದೆ. ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯಾದ್ಯಂತ ಇರುವ ಪದವಿ ಕಾಲೇಜುಗಳು ಹಾಗೂ ಡಿಪ್ಲಮೋ ಕಾಲೇಜುಗಳು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್ ತೆರೆಯಲಾಗಿದ್ದು, ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದೆ. 

ಅಲ್ಲದೇ, ಗ್ರಾಮಒನ್, ಕರ್ನಾಟಕ ಒನ್, ದಾವಣಗೆರೆ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಬಹುದು. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆಯಬಹುದು. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು  ಸಂಪರ್ಕಿಸಲು ಜಿಲ್ಲಾ ಉದ್ಯೋಗಾ ಧಿಕಾರಿ ರವೀಂದ್ರ ತಿಳಿಸಿದ್ದಾರೆ.

error: Content is protected !!