ಕೆ.ಎಂ. ಸುರೇಶ್ ಅವರಿಗೆ `ವರ್ಷದ ವ್ಯಕ್ತಿ’ ಪ್ರಶಸ್ತಿ

ಕೆ.ಎಂ. ಸುರೇಶ್ ಅವರಿಗೆ `ವರ್ಷದ ವ್ಯಕ್ತಿ’ ಪ್ರಶಸ್ತಿ

ದಾವಣಗೆರೆ, ಫೆ 12- ಜಿಲ್ಲೆ ಸಮಾಚಾರ ಪತ್ರಿಕಾ ಬಳಗದ ವತಿಯಿಂದ `ವರ್ಷದ ವ್ಯಕ್ತಿ-2024′ ರ ಪ್ರಶಸ್ತಿಗೆ ನಗರದ ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳ ಸಂಸ್ಥಾಪಕರೂ, ದೂಡಾ ಮಾಜಿ ಅಧ್ಯಕ್ಷರೂ ಆದ ಕೆ.ಎಂ. ಸುರೇಶ್ ಅವರು ಭಾಜನರಾಗಿದ್ದು, ನಾಳೆ ದಿನಾಂಕ 13 ರಂದು ಸಂಜೆ 5.30 ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಕೆ. ರಾಘವೇಂದ್ರ ನಾಯರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುರೇಶ್ ಅವರು ಶಿಕ್ಷಣ, ಆರೋಗ್ಯ, ಸಮಾಜ ಸೇವಾ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ, ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ವಾಗ್ಮಿ ಪ್ರೊ. ಎಂ.ಕೃಷ್ಣೇಗೌಡ ಪ್ರಶಸ್ತಿ ಪ್ರದಾನ ಮಾಡು ವರು. ಹಿರಿಯ ನ್ಯಾಯವಾದಿ ರಾಮಚಂದ್ರ ಕಲಾಲ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಕೆ. ವಾಮದೇವಪ್ಪ, ಸರ್‌ಎಂವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಸ್.ಜೆ. ಶ್ರೀಧರ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ್, ಜಿಲ್ಲೆ ಸಮಾಚಾರ ಪತ್ರಿಕಾ ಬಳಗದ ಸಂಸ್ಥಾಪಕ ವಿ.ಹನುಮಂತಪ್ಪ ಭಾಗವಹಿಸಲಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಪತ್ರಿಕಾ ಬಳಗದ ಆನಂದ ತೀರ್ಥಚಾರ್, ಟಿ.ಎಸ್. ಶೈಲಜಾ, ಮಹಾಂತೇಶ್ ವಿ.ಒಣರೊಟ್ಟಿ, ಶ್ರೀಮತಿ ಹೆಚ್. ಭಾರತಿ ಉಪಸ್ಥಿತರಿದ್ದರು.  

error: Content is protected !!