ವೃತ್ತಿ ರಂಗಭೂಮಿ ರಂಗಾಯಣ (ದಾವಣಗೆರೆ) ಮತ್ತು ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಆಶ್ರಯದಲ್ಲಿ ಕೊಂಡಜ್ಜಿಯ ಸ್ಕೌಟ್ ಕ್ಯಾಂಪ್‌ನಲ್ಲಿ ನಡೆಯುತ್ತಿರುವ ವೃತ್ತಿ ರಂಗ ನಾಟಕ ರಚನಾ ಶಿಬಿರದ ಸಮಾರೋಪ ಸಮಾರಂಭವು ಇಂದು ಸಂಜೆ 4 ಗಂಟಗೆ ಜರುಗಲಿದೆ.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಸಮಾರೋಪ ಭಾಷಣ ಮಾಡಲಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ನಾಟಕಕಾರ ಬಸವರಾಜ ಪಂಚಗಲ್, ರಂಗ ನಿರ್ದೇಶಕ ನಟರಾಜ ಹೊನ್ನವಳ್ಳಿ (ತುಮ ಕೂರು) ಅತಿಥಿಗಳಾಗಿದ್ದಾರೆ.
ಅಧ್ಯಕ್ಷತೆ : ವೃತ್ತಿ ರಂಗಭೂಮಿ ರಂಗಾಯಣ (ದಾವಣಗೆರೆ) ನಿರ್ದೇ ಶಕ ಮಲ್ಲಿಕಾರ್ಜುನ ಕಡಕೋಳ.