ದಾವಣಗೆರೆ, ಫೆ.12- ನಗರದ ಜಿ.ಎಂ. ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ನಾಳೆ ದಿನಾಂಕ 13ರ ಗುರುವಾರ ಬೆಳಗ್ಗೆ 9.30ಕ್ಕೆ ಅಂತರ ರಾಷ್ಟ್ರೀಯ ಶಿಕ್ಷಣ ಮೇಳ ನಡೆಯಲಿದೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ರಿಂದ ಸಂಜೆ 5ರ ವರೆಗೆ ನಡೆಯುವ ಕಾರ್ಯಕ್ರಮಕ್ಕೆ ವಿವಿ ಕುಲಪತಿ ಎಸ್.ಆರ್. ಶಂಕಪಾಲ್ ಶಿಕ್ಷಣ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬೆಂಗಳೂರಿನ ಎಜುಕೇಷನ್ ಸಂಸ್ಥೆಯ ಸಿಇಓ ಅರುಣ ಪ್ರಸಾದ್, ಕಂಪನಿಯ ಎಂ.ಡಿ ಸವಿತಾ ಅರುಣ್, ಡಾ. ವೀರ ಗಂಗಾಧರ ಸ್ವಾಮಿ ಇದ್ದರು.