ಹರಿಹರದಲ್ಲಿ ಇಂದು ಶ್ರೀ ಊರಮ್ಮ ದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ

ಹರಿಹರದಲ್ಲಿ ಇಂದು ಶ್ರೀ ಊರಮ್ಮ ದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ

ಹರಿಹರ, ಫೆ.17- ಇಲ್ಲಿನ ಇಂದಿರಾ ನಗರ ಬಡಾವಣೆಯ ಶ್ರೀ ಗ್ರಾಮದೇವತೆ ಊರಮ್ಮ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನಾಳೆ 18ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ಚಿಂಚಲಿ, ನಗರಸಭೆ ಅಧ್ಯಕ್ಷರಾದ ಕವಿತಾ ಮಾರುತಿ ಬೇಡರ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದ 38 ವರ್ಷದ ಹಿಂದೆ ಸ್ಥಾಪನೆ ಆಗಿರುವ ದೇವಸ್ಥಾನದ ಗರ್ಭ ಗುಡಿಯಲ್ಲಿ ಕಳಸವನ್ನು ಇಟ್ಟು ಪೂಜೆ ಸಲ್ಲಿಸುತ್ತಾ ಬರಲಾಗಿತ್ತು. ಆದರೆ ಇತ್ತೀಚೆಗೆ ಬಡಾವಣೆಯ ಹಿರಿಯರು ಮತ್ತು ಯುವಕರು ಸಮಾಲೋಚನೆ ನಡೆಸಿ ಶಿಲಾ ಮೂರ್ತಿಯನ್ನು ಸ್ಥಾಪನೆ ಮಾಡುವ ತೀರ್ಮಾನ ತೆಗೆದುಕೊಳ್ಳುವ ಮೂಲಕ ಸುಮಾರು 1.5 ಲಕ್ಷ ರೂ.ಗಳ ವೆಚ್ಚದಲ್ಲಿ ಶಿಲಾ ಮೂರ್ತಿಯನ್ನು  ನಿರ್ಮಿಸಲಾಗಿದ್ದು,  ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಾಳೆ ಮಂಗಳವಾರ ಬೆಳಿಗ್ಗೆ 6 -30 ಕ್ಕೆ ಹರಪನಹಳ್ಳಿ ತಗ್ಗಿನಮಠದ ಪಟ್ಟಾಧ್ಯಕ್ಷರಾದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ   ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಸಬಾ ಗೌಡ್ರು ಲಿಂಗಾರಾಜ್ ಪಾಟೀಲ್, ಮಾಜೇನಹಳ್ಳಿ ಗೌಡ್ರು ಚನ್ನಬಸಪ್ಪ, ಬಣಕಾರ ಆಂಜನೇಯ, ಸಿದ್ದಪ್ಪ, ಶಾನಭೋಗರು ಗಿರೀಶ್, ಗ್ರಾಮದೇವತೆ ಉತ್ಸವ 2025 ನೇ ಸಾಲಿನ ಸಮಿತಿಯ ಅಧ್ಯಕ್ಷ ಹಾರ್ನಳ್ಳಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ್ರು, ಖಜಾಂಚಿ ಕೆಂಚಪ್ಪ ದೊಡ್ಡಮನೆ, ಸಹ ಕಾರ್ಯದರ್ಶಿ ಸಿದ್ದಪ್ಪ, ಹಾಗೂ ಕಾರ್ಯಕಾರಿ ಸಮಿತಿಯವರ ಸಮ್ಮುಖದಲ್ಲಿ ಪೂಜಾ ಕಾರ್ಯಕ್ರಮಗಳನ್ನು ನೇರವೇರಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಎಸ್.ರಾಮಪ್ಪ, ಬಿಜೆಪಿ ಪಕ್ಷದ ಮುಖಂಡ ಚಂದ್ರಶೇಖರ್ ಪೂಜಾರ್,  ಮಾಜಿ ಜಿಪಂ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಕಾಂಗ್ರೆಸ್ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್, ನಗರಸಭೆಯ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಉಪಾಧ್ಯಕ್ಷ ಜಂಬಣ್ಣ ಗುತ್ತೂರು ಮತ್ತಿತರರು ಆಗಮಿಸು ತ್ತಾರೆ ಎಂದು   ಜಿ.ಹೆಚ್. ಕೃಷ್ಣಮೂರ್ತಿ ತಿಳಿಸಿದರು.  

ಈ ಸಂದರ್ಭದಲ್ಲಿ ಮಾರುತಿ ವಕೀಲರು, ಜೆ ಪ್ರದೀಪ್, ಎಂ. ಟಿಕೋಜಿರಾವ್, ಇತರರು ಹಾಜರಿದ್ದರು.

error: Content is protected !!