ದಾವಣಗೆರೆ, ಫೆ. 18 – ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಹೆಚ್. ವಿಶ್ವನಾಥ್ ಅವರು ಕನ್ನಡ ಪ್ರಭ – ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆ ವತಿಯಿಂದ ನೀಡಲಾಗುವ ಸುವರ್ಣ ಕನ್ನಡಿಗ – 2025 ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಡಾ.ಹೆಚ್. ವಿಶ್ವನಾಥ್ ಅವರ ಶೈಕ್ಷಣಿಕ ಕ್ಷೇತ್ರದ ಅಪಾರ ಸಾಧನೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲ ಸಚಿವ (ಪರೀಕ್ಷಾಂಗ) ಸ್ಥಾನದಲ್ಲಿನ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದ್ದು, ಬೆಂಗಳೂರಿನ ತಾಜ್ ಪಂಚತಾರಾ ಹೋಟೆಲ್‌ನಲ್ಲಿ ಇಂದು ಸಂಜೆ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.