ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ

ದಾವಣಗೆರೆ, ಫೆ.20- ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮವನ್ನು ನೂತನವಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಈಗಾಗಲೇ ವಿವಿಧ ಸಂಸ್ಥೆಗಳ ಮೂಲಕ ಹೊರಗುತ್ತಿಗೆಯಡಿ ಟೆಂಡರ್ ಮೂಲಕ ಸೇವೆಯನ್ನು ಸಲ್ಲಿಸಲಾಗುತ್ತಿದ್ದು, ಈ ಎಲ್ಲಾ ಹೊರಗುತ್ತಿಗೆ ನೌಕರರು ಇನ್ನು ಮುಂದೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘದಡಿಯಲ್ಲಿ ಕೆಲಸ ನಿರ್ವಹಿಸುವರು. ಈ ನೌಕರರಿಗೆ ಜಿಲ್ಲಾ ಸಂಘದಿಂದಲೇ ನೇರವಾಗಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಹೊರಗುತ್ತಿಗೆ ನೌಕರರು ಈ ಸಹಕಾರ ಸಂಘದ ಸದಸ್ಯರಾಗಿರುವರು.  

ಹೊರಗುತ್ತಿಗೆ ನೌಕರ ಸಿಬ್ಬಂದಿಯ ವರು ಸಂಘದ ಸದಸ್ಯತ್ವ ಪಡೆಯಬ ಹುದಾಗಿದ್ದು, ತಮ್ಮ ಇಲಾಖೆ ಮುಖ್ಯ ಸ್ಥರುಗಳಿಂದ ಅರ್ಜಿ ಪಡೆದು ನೋಂ ದಣಿ ಮಾಡಿಕೊಳ್ಳಲು ತಿಳಿಸಿದ್ದಾರೆ.

error: Content is protected !!