ಆಯುಷ್ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಇಂದು ಬೆಳಿಗ್ಗೆ 10.30ಕ್ಕೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ನಡೆಯಲಿದೆ.
ಶಿಬಿರದ ಉದ್ಘಾಟನೆಯನ್ನು ಜಿಲ್ಲಾ ನ್ಯಾಯಾಧೀಶರಾದ ರಾಜೇ ಶ್ವರಿ ಎನ್.ಹೆಗಡೆ ನೆರವೇರಿಸುವರು. ನ್ಯಾಯಾಧೀಶರುಗಳಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯ, ಆರ್.ಎನ್.ಪ್ರವೀಣ್‍ಕುಮಾರ್, ಶ್ರೀರಾಮ ನಾರಾಯಣ ಹೆಗಡೆ, ಶಿವಪ್ಪ ಗಂಗಪ್ಪ ಸಲಗರೆ, ಟಿ.ಎಂ.ನಿವೇದತಾ, ಮಹಾವೀರ ಮ.ಕರೆಣ್ಣವರ, ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್‍ಕುಮಾರ್ ಉಪಸ್ಥಿತರಿರುವರು.