ರಮೇಶ್ ಜಹಗರ್‌ದಾರ್‌ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ರಮೇಶ್ ಜಹಗರ್‌ದಾರ್‌ ಅವರಿಗೆ  ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು, ಫೆ. 21 – ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಬೆಂಗಳೂರಿನ ಐ.ಐ.ಎಸ್.ಸಿ. ಆವರಣದ ಜೆ.ಎನ್. ಟಾಟಾ ಸಭಾಂಗಣದಲ್ಲಿ  ಕಳೆದ ವಾರ ಆಯೋಜಿಸಿದ್ದ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಜಯವಾಣಿಯ ದಾವಣಗೆರೆ ವಿಶೇಷ ವರದಿಗಾರ ರಮೇಶ್ ಜಹಗೀರದಾರ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರದಾನ ಮಾಡಿದರು. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮಾಧ್ಯಮ ಅಕಾಡೆಮಿ ಸದಸ್ಯ ಇ.ಎಂ. ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

error: Content is protected !!