ನಗರದ ಇಂದು ಬಂಬೂಬಜಾರ್‌ನ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ

ಮಹಾಶಿವರಾತ್ರಿ ಮತ್ತು ರಥೋತ್ಸವದ ಅಂಗವಾಗಿ ಬಂಬೂ ಬಂಜಾರ್‌ನ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಇಂದು ರುದ್ರಾಭಿಷೇಕ ಮತ್ತು ಭಕ್ತಾದಿಗಳಿಂದ ಅಖಂಡ ಭಜನಾ ಕಾರ್ಯಕ್ರಮ ಆಯೋಜಿಸಿದೆ.

ನಾಳೆ ಗುರುವಾರ ಸಂಜೆ 5 ಗಂಟೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ನಡೆಯಲಿದ್ದು, ಶಿವಶರಣ ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ, ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಮಹಾಸ್ವಾಮಿಯ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ರಥವು ಬಂಬೂಬಜಾರ್‌ನ ಮುಖ್ಯ ರಸ್ತೆಯಲ್ಲಿ ಚಲಿಸಿ ಮರಳಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಬಂದು ತಲುಪಲಿದೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಇರುತ್ತದೆ ಎಂದು ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಮೇದಾರ ಗಿರಿಜನ ಅಭ್ಯುದಯ ಸೇವಾ ಸಂಘ ತಿಳಿಸಿದೆ.

error: Content is protected !!