ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಬಿಐಇಟಿ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಪ್ರಶಿಕ್ಷಣಾರ್ಥಿಗಳ ವಿಜ್ಞಾನ ರಸ ಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.
ಬಿಐಇಟಿ ನಿರ್ದೇಶಕ ವೈ. ವೃಷಭೇಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಜ್ಞಾನ ಪರಿಷತ್ತಿನ ಗೌರವಾಧ್ಯಕ್ಷ ಡಾ.ಜೆ.ಬಿ. ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಎಂ.ಆರ್. ಜಗದೀಶ್, ಗುರುಪ್ರಸಾದ್, ಎಲ್.ಎಂ. ವಾಗೀಶ್, ಗಿರೀಶ್, ಡಾ. ಅನಿಲ್ ಕುಮಾರ್, ಅಂಗಡಿ ಸಂಗಪ್ಪ, ಕೆ.ಸಿದ್ದೇಶ್, ಟಿ. ಸುರೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.