ದಾವಣಗೆರೆ, ಫೆ.27- ನಗರದ ಬಂಬೂ ಬಜಾರ್‌ನಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವವು ಗುರುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ಶಿವಶರಣ ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ, ಆವರಗೊಳ್ಳದ
ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ರಥೋತ್ಸವದ ನಂತರ ಅನ್ನ ಸಂತರ್ಪಣೆ ನಡೆಯಿತು. ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಬಂಬೂ ಬಜಾರ್‌ನಲ್ಲಿ ವಿಜೃಂಭಣೆಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ
