ಮಲೇಬೆನ್ನೂರು ಸಮೀಪದ ಕುಂಬಳೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯ್ತಿ ನೂತನ ಕಟ್ಟಡವಾದ ರಾಜೀವ್‌ಗಾಂಧಿ ಸೇವಾ ಕೇಂದ್ರ ಇಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಉದ್ಯೋಗ ಖಾತ್ರಿ ಯೋಜನೆಯಡಿ 29 ಲಕ್ಷ ರೂ. ಮತ್ತು ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ 20 ಲಕ್ಷ ರೂ. ಸೇರಿ ಒಟ್ಟು 49 ಲಕ್ಷ ರೂ. ವೆಚ್ಚದಲ್ಲಿ ಈ ಗ್ರಾಮ ಸೌಧ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಪಿಡಿಓ ಎಂ. ನರಸಿಂಹಮೂರ್ತಿ ತಿಳಿಸಿದ್ದಾರೆ.
ಗ್ರಾ.ಪಂ. ಅಧ್ಯಕ್ಷರಾದ ಉಮಾದೇವಿ ಎಂ.ಹೆಚ್. ಶಿವರಾಮ ಚಂದ್ರಪ್ಪ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಶಾಸಕ ಬಿ.ಪಿ. ಹರೀಶ್ ಅವರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಚಿದಾನಂದ ಎಂ. ಗೌಡ, ಕೆ. ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ. ಸಿಇಓ ಡಾ. ಸುರೇಶ್ ಇಟ್ನಾಳ್ ಸೇರಿದಂತೆ ಇನ್ನೂ ಅನೇಕ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆಂದು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಜಿ.ಎಂ. ಹರೀಶ್ ತಿಳಿಸಿದ್ದಾರೆ.