ಜಗಳೂರು, ಫೆ.28- ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಹಿರಿಯ ನೇತ್ರಾಧಿಕಾರಿ ಕೆ.ಎಂ. ಪರಮೇಶ್ವರಪ್ಪ ಸುದೀರ್ಘ 39 ವರ್ಷಗಳ ಸರ್ಕಾರಿ ಸೇವೆಯಿಂದ ಇಂದು ಸೇವಾ ನಿವೃತ್ತಿ ಹೊಂದಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸತತವಾಗಿ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ತಾಲ್ಲೂಕು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ನೇತ್ರಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಮತ್ತು ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಅಡಿಯಲ್ಲಿ ಇವರ ಅತ್ಯುತ್ತಮ ಸೇವೆಗಾಗಿ ಸರ್ಕಾರ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿದೆ.