ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರ ಉದ್ಘಾಟನೆ

ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರ ಉದ್ಘಾಟನೆ

ಕೊಟ್ಟೂರು, ಮಾ.5- ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ರಾಗಿ ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ. ದಾರುಕೇಶ್ ಹೇಳಿದರು.

ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಸರ್ಕಾರಿ ಬೆಂಬಲ ಬೆಲೆಯ ರಾಗಿ ಕೇಂದ್ರದಲ್ಲಿ ರೈತರಿಂದ ಖರೀದಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಸೂಕ್ತ ದಾಸ್ತಾನಿಗಾಗಿ ರಾಗಿ ಖರೀದ ಕೇಂದ್ರಗಳಲ್ಲಿ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ನೀಡಿದರು.

ಎ.ಪಿ.ಎಂ.ಸಿ ಕಾರ್ಯದರ್ಶಿ ವೀರಣ್ಣ ಮಾತನಾಡಿ, ರಾಗಿ ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಆಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ರಾಗಿಯನ್ನು ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ಅವರು ತಿಳಿಸಿದರು.

ಈ ಸಂಧರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷ ಎಂ. ಶಿವಣ್ಣ, ಸದಸ್ಯರಾದ ಚಿರಿಬಿ ಕೊಟ್ರೇಶ್, ಶಿವಲಿಂಗಪ್ಪ, ನೂರ್ಯ ನಾಯ್ಕ, ವಿ.ಎಸ್.ಎಸ್.ಎನ್ ಅಧ್ಯಕ್ಷ ಸತೀಶ್ ಹರಾಳು, ವರ್ತಕರಾದ ಬಿ.ಎಸ್.ವೀರೇಶ್, ಚಾಪಿ ಚಂದ್ರಪ್ಪ, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!