ದಾವಣಗೆರೆ ಜಿಲ್ಲೆಗೆ ಭರಪೂರ ಕೊಡುಗೆಗಳು : ಸಚಿವ ಎಸ್ಸೆಸ್ಸೆಂ ಸಂತಸ

ದಾವಣಗೆರೆ ಜಿಲ್ಲೆಗೆ ಭರಪೂರ ಕೊಡುಗೆಗಳು : ಸಚಿವ ಎಸ್ಸೆಸ್ಸೆಂ ಸಂತಸ

ದಾವಣಗೆರೆ, ಮಾ.7- ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ  ಎಂದು  ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ದಾವಣಗೆರೆ ಜಿಲ್ಲಾ ಆಸ್ಪತ್ರೆ ಸೇರಿದಂತೆ ಇತರೆ ಜಿಲ್ಲೆಗಳ ಒಟ್ಟು 8 ತಾಲ್ಲೂಕು ಆಸ್ಪತ್ರೆಗಳನ್ನು 650 ಕೋಟಿ ರೂ ವೆಚ್ಚದಲ್ಲಿ ನವೀಕರಣಕ್ಕೆ ಬಜೆಟ್ ನಲ್ಲಿ ಮೀಸಲಿಡಲಾಗಿದೆ. ಬಂಜಾರ ಸಮುದಾಯದ ಧಾರ್ಮಿಕ ಸ್ಥಳವಾದ   ಸಂತ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆ  ಪ್ರಾರಂಭಿಸಲು ಹಾಗೂ ಕೊಂಡಜ್ಜಿ ಬೆಟ್ಟದ ಪರಿಸರದಲ್ಲಿ ಸ್ಥಾಪಿಸಲಾಗಿ ರುವ ವೃತ್ತಿರಂಗಭೂಮಿ ರಂಗಾಯಣ ದಲ್ಲಿ 3.00 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ರಂ ಗಾಯಣ ಸಮುಚ್ಚಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣ ಕ್ಕೆ ನಿರ್ಧಾರ ಮಾಡಲಾಗಿದೆ ಎಂದರು.

ಜಿಲ್ಲೆಯ ಜನರ ನೀರಿನ ಬವಣೆ ನೀಗಿಸಲು ಜಗಳೂರು ಕೆರೆ ತುಂಬಿಸುವ ಯೋಜನೆ ಹಾಗೂ ಹೊನ್ನಾಳಿಯ ಬೆನಕನಹಳ್ಳಿ, ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯ ಸರ್ಕಾರವು ರೈಲ್ವೆ ಸಹಯೋಗ ದೊಂದಿಗೆ ತುಮಕೂರು-ದಾವಣಗೆರೆ ಸೇರಿದಂತೆ 9 ವಿವಿಧ ರೈಲ್ವೆ ಯೋಜನೆ ಗಳನ್ನು ಕೈಗೆತ್ತಿಕೊಳ್ಳಲಾಗಿದೆ, ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ದಾವಣಗೆರೆ ಸೇರಿದಂತೆ ರಾಜ್ಯದ 31 ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12 ತರಗತಿವರೆಗಿನ ವಸತಿ ಶಾಲೆಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದಿರುವ ಸಚಿವರು, ಪ್ರಸಕ್ತ ವರ್ಷದಿಂದ ದಾವಣ ಗೆರೆ ಕೇಂದ್ರ ವಲಯದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪನೆಗೆ ನಿರ್ಧರಿಸಲಾಗಿದೆ. ದಾವಣ ಗೆರೆ ಸೇರಿದಂತೆ ಇತರೆ 9 ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ ವೆಚ್ಚದಲ್ಲಿ ಎಐ ಆಧಾರಿತ ವಿದ್ಯುನ್ಮಾನ ಕ್ಯಾಮರಾ ಅಳವಡಿಸಲು   ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. 

2025-26 ನೇ ಸಾಲಿನ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ  ಮುಖ್ಯಮಂತ್ರಿ ಗಳಿಗೆ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಈ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಹಾಗೂ ಕೊಡುಗೆಗಳನ್ನು  ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸುವೆ ಎಂದು ಸಚಿವ ಎಸ್ಸೆಸ್ಸೆಂ ತಿಳಿಸಿದ್ದಾರೆ.

error: Content is protected !!