ವನಿತಾ ಸಮಾಜದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವನಿತಾ ಸಮಾಜದ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ‘ವನಿತಾ ಉತ್ಸವ’ ಕಾರ್ಯಕ್ರಮವು ಇಂದು ಸಂಜೆ 5 ಗಂಟೆಗೆ ವನಿತಾ ಸಮಾಜದ ಶ್ರೀ ಸತ್ಯಸಾಯಿ ರಂಗಮಂದಿರದಲ್ಲಿ ನಡೆಯಲಿದೆ.
ವನಿತಾ ಸಮಾಜದ ಅಧ್ಯಕ್ಷರಾದ ಪದ್ಮ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶಶಿಕಲಾ ಕೃಷ್ಣಮೂರ್ತಿ, ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಅರುಣಕುಮಾರಿ ಬಿರಾದಾರ್ ಪಾಲ್ಗೊಳ್ಳಲಿದ್ದಾರೆ.
ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್‌ನ ಛೇರ್ಮನ್ ಸಿ.ಆರ್. ವಿರೂಪಾಕ್ಷಪ್ಪ ಅವರು ಬಾಪೂಜಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಕಿರುವಾಡಿ ಗಿರಿಜಮ್ಮ ಅವರಿಗೆ ‘ವನಿತಾ ಸೇವಾ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ದಯಾಮರಣ ಹೋರಾಟಗಾರರಾದ ಹೆಚ್.ಬಿ. ಕರಿಬಸಮ್ಮ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.