ಮಲೇಬೆನ್ನೂರು ಸಮೀಪದ ಜಿಗಳಿ ಗ್ರಾಮದ ಆರಾಧ್ಯ ದೈವ ಶ್ರೀ ರಂಗನಾಥ ಸ್ವಾಮಿ ರಥೋತ್ಸವದ ಜಾತ್ರಾ ಮಹೋತ್ಸವವು ಇಂದಿನಿಂದ ದಿನಾಂಕ 18ರವರೆಗೆ ಜರುಗಲಿದೆ.
ಇಂದು ರಾತ್ರಿ 8.30ಕ್ಕೆ ಮಹಾರಥಕ್ಕೆ ಕಳಸಧಾರಣೆ ಮಾಡಲಾಗುವುದು. ದಿನಾಂಕ 12ರ ಬುಧವಾರ ಬೆಳಿಗ್ಗೆ 8 ಗಂಟೆಗೆ ಗಜ ಉತ್ಸವ, ಸಂಜೆ 4 ಗಂಟೆಯಿಂದ ಶಸ್ತ್ರ್ರ ಕಾರ್ಯಕ್ರಮ, ಇದೇ ದಿನ ತಡರಾತ್ರಿ (ಗುರುವಾರ ಬೆಳಗಿನ ಜಾವ) ಶ್ರೀ ರಂಗನಾಥಸ್ವಾಮಿ ರಥೋತ್ಸವವು ಶ್ರೀ ಬೀರಲಿಂಗೇಶ್ವರ, ಯಲವಟ್ಟಿಯ ಶ್ರೀ ಆಂಜನೇಯ ಸ್ವಾಮಿ ಹಾಗೂ ಜಿ. ಬೇವಿನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ಜೊತೆಗೂಡಿ ಬ್ರಾಹ್ಮೀ ಮುಹೂರ್ತದಲ್ಲಿ ನಡೆಯಲಿದೆ.
ದಿನಾಂಕ 13ರ ಗುರುವಾರ ಬೆಳಿಗ್ಗೆ 10.30 ರಿಂದ ಜವಳ ಮುದ್ರೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಓಕಳಿ ನಂತರ ಕಂಕಣ ವಿಸರ್ಜನೆ ಮಾಡಲಾಗುವುದು.
ದಿನಾಂಕ 14 ರ ಶುಕ್ರವಾರ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಸಂಜೆ 7.30 ರಿಂದ ಶ್ರೀ ರಂಗನಾಥ ಸ್ವಾಮಿ, ಶ್ರೀ ಬೀರಲಿಂಗೇಶ್ವರ ಸ್ವಾಮಿ ಮತ್ತು ಜಿ. ಬೇವಿನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವರುಗಳ ಭೂತನ ಸೇವೆ ನಡೆಯಲಿದ್ದು, ದೇವರ ಉತ್ಸವ ಜರುಗಲಿದೆ.
ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಅಂಬಾ ಭಾವಾನಿ ದೇವಸ್ಥಾನ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಗಳ ಆವರಣದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ದಿನಾಂಕ 18ರ ಮಂಗಳವಾರ ಶ್ರೀ ಚೌಡೇಶ್ವರಿ ಅಮ್ಮನವರ ಹಬ್ಬ ನಡೆಯಲಿದೆ ಎಂದು ಗ್ರಾಮದ ಗೌಡ್ರ ಬಸವರಾಜಪ್ಪ ತಿಳಿಸಿದ್ದಾರೆ.