ಹರಿಹರ, ಮಾ. 9- ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ರಾಜ್ಯದ ಎಲ್ಲಾ ವರ್ಗದ ಜನರಿಗೆ ಅತ್ಯಂತ ಉಪಯುಕ್ತ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.
ಈ ಹಿಂದೆ ಹೆಚ್.ಡಿ ದೇವೇಗೌಡರು, ಜೆ.ಹೆಚ್. ಪಟೇಲ್ ಇತರರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಹಣಕಾಸು ಸಚಿವರಾಗಿ ಬಜೆಟ್ ಮಂಡಿಸಿದ ಅನುಭವದ ಜೊತೆ ತಾವೂ ಸಹ ಎರಡು ಬಾರಿ ಮುಖ್ಯಮಂತ್ರಿಗಳಾಗಿ ಬಜೆಟ್ ಮಂಡನೆ ಮಾಡಿ ಬಡವರು, ಶೋಷಿತರು, ರೈತರು, ಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗದ ಜನರ ಏಳಿಗೆಗಾಗಿ ಬಹಳ ಉತ್ತಮವಾದ ಬಜೆಟ್ ಮಂಡನೆ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ವ್ಯವಸ್ಥೆಗಳು ಇನ್ನಷ್ಟು ಅಭಿವೃದ್ಧಿ ಹೊಂದುವುದಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.