ದಾವಣಗೆರೆ, ಮಾ. 9 – ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು davanagere.nic.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿ ಅಧ್ಯಕ್ಷ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
March 13, 2025