ಕ್ರೀಡಾಂಗಣ ನಿರ್ವಹಣೆಗೆ ಮಾರ್ಗಸೂಚಿ ಪಾಲಿಸಲು ಸರ್ಕಾರದ ಆದೇಶ

ದಾವಣಗೆರೆ, ಮಾ.9- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಕ್ರೀಡಾಂಗಣದ ದೈನಂದಿನ ನಿರ್ವ ಹಣೆಗಾಗಿ ನಿರ್ವಹಣಾ ಸಮಿತಿ ರಚಿಸಿ ಕೆಲವು ಮಾರ್ಗ ಸೂಚಿಗಳನ್ನು ಅನುಸರಿಸುವಂತೆ ಆದೇಶ ಹೊರಡಿಸಿದೆ.

ನಿರ್ವಹಣಾ ಸಮಿತಿಗಳು ಸರ್ಕಾರದ ಪೂರ್ವಾನುಮತಿ ಇಲ್ಲದೇ ಗುತ್ತಿಗೆ ಅಥವಾ ಹೊರಗುತ್ತಿಗೆ ಸೇರಿದಂತೆ ಯಾವುದೇ ನೇಮಕಾತಿ ಮಾಡುವಂತಿಲ್ಲ.

ಜಿಲ್ಲೆಯ ಯಾವುದೇ ಇಲಾಖಾ ಕ್ರೀಡಾಂಗಣದಲ್ಲಿ 50 ಲಕ್ಷ ವೆಚ್ಚ ಮೀರಿದ ಅಭಿವೃದ್ಧಿ ಕಾರ್ಯ ಅಥವಾ ವಾರ್ಷಿಕ ಒಟ್ಟು 100 ಲಕ್ಷ ಮಿತಿ ಮೇಲ್ಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೊದಲು ಇಲಾಖೆಯ ಪೂರ್ವಾನುಮತಿ ಪಡೆಯುವುದು ಕಡ್ಡಾಯ.

ಕ್ರೀಡಾಂಗಣದ ಆಸ್ತಿಗಳನ್ನು ವಾರ್ಷಿಕ ಬಾಡಿಗೆಗೆ ನೀಡುವ ಅಥವಾ ಹೊರಗುತ್ತಿಗೆ ನೀಡುವ ಸಂದರ್ಭದಲ್ಲಿ ಇಲಾಖೆಯ ಪೂರ್ವಾನುಮತಿ ಪಡೆಯಬೇಕು. ಈ ಆಸ್ತಿಗಳ ನ್ನು ಇಲಾಖೆಯ ಪೂರ್ವಾನುಮತಿ ಇಲ್ಲದೇ ಇತರೆ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳಿಗೆ ತಾತ್ಕಾಲಿಕ ಅಥವಾ ಶಾಶ್ವತ ವಾಗಿ ಪರಭಾರೆ ಮಾಡುವುದು ಕಡ್ಡಾಯವಾಗಿ ನಿಷೇಧಿಸಿದೆ.

error: Content is protected !!